ಶ್ರೀ ರಾಜೀವ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ರೇಣುಕಾ ಆಯ್ಕೆ

ಅಂಕೋಲಾ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ವತಿಯಿಂದ ಪ್ರಧಾನ ಮಾಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಅಂಕೋಲಾ ತಾಲೂಕಿನಿಂದ ಶ್ರೀಮತಿ ರೇಣುಕಾ ಹೊನ್ನಪ್ಪ ನಾಯಕ ಇವರನ್ನು ಆಯ್ಕೆ ಮಾಡಲಾಗಿದೆ.

ರೇಣುಕಾ ನಾಯಕ ಇವರು ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆ ಬೆಳಸೆ ನಂ ೨ ಇಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಜೊತೆಗೆ ಅನೇಕ ದಾನಿಗಳ ನೆರವಿನಿಂದ ಅವರಿಗೆ ಶೈಕ್ಷಣಿಕ ಪರಿಕರ, ಶಿಕ್ಷಣ ಹಾಗೂ ಆರೋಗ್ಯಕ್ಕಾಗಿ ಆರ್ಥಿಕ ನೆರವು ಹಾಗೂ ಶಾಲೆಯ ಭೌತಿಕ ಸೌಲಭ್ಯಗಳ ಅಭಿವೃದ್ಧಿಯನ್ನು ಹಲವಾರು ವರ್ಷಗಳಿಂದ ಮಾಡುತ್ತಿದ್ದಾರೆ.

ಇಲಾಖೆಯ ವತಿಯಿಂದ ಜಿಲ್ಲಾ ಶಿಕ್ಷಕ ಪ್ರಶಸ್ತಿ ಕೂಡ ಇವರಿಗೆ ಈ ಹಿಂದೆ ಲಭಿಸಿದೆ.ದಿನಾಂಕ 5/9/2026 ರ ಶಿಕ್ಷಕ ದಿನಾಚರಣೆಯ ದಿನ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಕೆ ಪಿ ಸಿ ಸಿ ಶಿಕ್ಷಕರ ಘಟಕದ ಜಿಲ್ಲಾದ್ಯಕ್ಷರಾದ ಶ್ರೀ ಎನ್ ಬಿ ನಾಯಕ ಸೂರ್ವೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!