ಅಂಕೋಲಾ :ತಾಲೂಕಿನ ಶ್ರೀ ಗಜಾನನ ಟ್ಯಾಕ್ಸಿ ಮಾಲಕ ಹಾಗೂ ಚಾಲಕರ ಸಂಘದ ವತಿಯಿಂದ ಆಗಸ್ಟ್ 15, 2026ರಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಅರ್ಪಿಸಲಾಯಿತು. ತದನಂತರ ಸಂಘದ ಅಧ್ಯಕ್ಷರಾದ ಶ್ರೀ ರಮಕಾಂತ ನಾಯ್ಕ(ಗಜು ) ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಎಲ್ಲರೂ ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿ ಗೌರವ ಸಲ್ಲಿಸಿದರು. ಶುಭ್ರ ಬಿಳಿ ಸಮವಸ್ತ್ರ ಧರಿಸಿದ್ದ ಟ್ಯಾಕ್ಸಿ ಮಾಲಕರು ಹಾಗೂ ಚಾಲಕರು ಕಾರ್ಯಕ್ರಮಕ್ಕೆ ಶಿಸ್ತಿನ ಕಳೆ ನೀಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಕಾನೂನು ಸಲಹೆಗಾರರಾದ ವಕೀಲ ನಾಗಾನಂದ ಈಶ್ವರ ಬಂಟ ಅವರು, “ಭಾರತ ಸ್ವಾತಂತ್ರ್ಯಗಳಿಸಿ ಇಂದಿಗೆ 80 ವರ್ಷಗಳಾಗಿವೆ. ಈ ಶುಭ ದಿನದಂದು ನಾವೆಲ್ಲರೂ ಒಗ್ಗಟ್ಟು ಮತ್ತು ಸಹಬಾಳ್ವೆಯಿಂದ ಬಾಳುವ ಸಂಕಲ್ಪ ಮಾಡಬೇಕಿದೆ. ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಗಜಾನನ ಟ್ಯಾಕ್ಸಿ ಸಂಘವು ಹಲವು ವರ್ಷಗಳಿಂದ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿಕೊಂಡು ಬರುವ ಮೂಲಕ ಸಮಾಜದಲ್ಲಿ ದೇಶಪ್ರೇಮವನ್ನು ಸಾರುತ್ತಿರುವುದು ಶ್ಲಾಘನೀಯ” ಎಂದರು.ಶ್ರೀ ಗಜಾನನ ಟ್ಯಾಕ್ಸಿ ಸಂಘವು ನಿರಂತರವಾಗಿ ರಕ್ತದಾನ ಶಿಬಿರ, ಕ್ರೀಡಾಕೂಟ ಹಾಗೂ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಧ್ವಜಾರೋಹಣದ ನಂತರ ಎಲ್ಲರಿಗೂ ಸಿಹಿ ಹಂಚಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಲಾಯಿತು













Leave a Reply