ಅಂಕೋಲಾ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ ಕುಮಾರ ನಾಯಕ್ ವಿಧಿವಶ .

ಅಂಕೋಲಾ: ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ, ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರವೀಣ್ ಕುಮಾರ ನಾಯಕ ಅವರು ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ.

ಮೂಲತಃ ಅಗ್ರಗೋಣದವರಾದ ಇವರು ತಾಲೂಕಿನ ಪುರಲಕ್ಕಿ ಭೇಣದಲ್ಲಿ ಸ್ವಂತ ನಿವೇಶನ ನಿರ್ಮಿಸಿಕೊಂಡು ವಾಸ್ತವ್ಯ ಹೊಂದಿದ್ದರು. ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಅಂಕೋಲಾ ಪುರಸಭೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಪ್ರವೀಣ್ ನಾಯಕ್ ಅವರು, ಹಿರಿಯ ಆರೋಗ್ಯ ನಿರೀಕ್ಷಕರಾಗಿ ಅನೇಕ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದರು. ಮಧ್ಯಂತರದಲ್ಲಿ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತಿಯಲ್ಲಿ ಮುಖ್ಯಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅಂಕೋಲಾ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿರಪರಿಚಿತ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು

ಮೃತರು ತಂದೆ, ಪತ್ನಿ ಪ್ರಿಯದರ್ಶಿನಿ, ಮಗಳು ಶಾಂಚಿ ಹಾಗೂ ಮಗ ಶ್ಲೋಕ್ ಅವರನ್ನು ಮತ್ತು ಅಪಾರ ಬಂಧು ಬಳಗವನ್ನು ತೊರೆದಿದ್ದಾರೆ.ಪ್ರವೀಣ್ ನಾಯಕ್ ಅವರ ಅಕಾಲಿಕ ಅಗಲಿಕೆಗೆ ಅಂಕೋಲಾ ಪುರಸಭೆಯ ಮುಖ್ಯಾಧಿಕಾರಿ ಯೇಸು ಎಸ್. ಬೆಂಗಳೂರು, ಮ್ಯಾನೇಜರ್ ಬೀರಣ್ಣ ನಾಯಕ್, ಪುರಸಭೆಯ ಹಿರಿಯ-ಕಿರಿಯ ಅಧಿಕಾರಿಗಳು ಹಾಗೂ ಪುರಸಭೆಯ ಚುನಾಯಿತ ಮಾಜಿ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!