ಅಂಕೋಲಾದ ಶೇಡಗೇರಿ ಗ್ರಾಮದ ಸರ್ವೇ ನಂ. 80 ಬಿ ನೇದರ ಸರ್ಕಾರಿ ರಸ್ತೆ ಮತ್ತು ಮಾರುತಿ ದೇವಸ್ಥಾನದ ವಾಹನ ನಿಲುಗಡೆಗೆ ಮೀಸಲಾದ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸುತ್ತಿರುವ ಬಗ್ಗೆ ಸ್ಥಳೀಯರಾದ ಸಂಜೀವ ಪಿ. ನಾಯ್ಕ ಅವರು ಅಂಕೋಲಾ ಪುರಸಭೆಯ ಮುಖ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಹಿಂದೆ ಜಿಲ್ಲಾಧಿಕಾರಿಗಳು ಮತ್ತು ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸದ್ಯ ಈ ವಿವಾದಿತ ಜಾಗವನ್ನು ಸ್ಥಳೀಯ ರೋರ್ವರು ಒತ್ತುವರಿ ಮಾಡಿ ಕಾಂಪೌಂಡ್ ಕೆಲಸ ಮುಂದುವರಿಸಿದ್ದು, ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವಂತೆ ಅವರು ವಿನಂತಿಸಿದ್ದಾರೆ. ಈ ಸಂಬಂಧ ಕಾರವಾರ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಹಾಗೂ ಪತ್ರಕರ್ತರ ಸಂಘಕ್ಕೂ ಪ್ರತಿಗಳನ್ನು ಕಳುಹಿಸಲಾಗಿದೆ.












Leave a Reply