ಇಕೆವೈಸಿ ಭರ್ತಿಗೆ ಬಂದಿದೆ “ಅನ್ನಸೇವೆ “ಆ್ಯಪ್, ಪಡಿತರ ಚೀಟಿಗೆ ಆಧಾರ್ ದೃಢೀಕರಣ ಇನ್ನು ಸಲೀಸು | ರೇಷನ್‌ ಅಂಗಡಿ ಮುಂದೆ ಕ್ಯೂ ನಿಲ್ಲಬೇಕಿಲ್ಲ.

ಇಕೆವೈಸಿ ಭರ್ತಿಗೆ ಬಂದಿದೆ ಅನ್ನಸೇವೆ ಆ್ಯಪ್. ಪಡಿತರ ಚೀಟಿಗೆ ಆಧಾರ್ ದೃಢೀಕರಣ ಇನ್ನು ಸಲೀಸು | ರೇಷನ್‌ ಅಂಗಡಿ ಮುಂದೆ ಕ್ಯೂ ನಿಲ್ಲಬೇಕಿಲ್ಲ.

.ಬೆಂಗಳೂರು:ಪಡಿತರ ಚೀಟಿಗೆ ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡಿಸಲು ಇನ್ನುಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ನಿಲ್ಲದೇ ಮನೆಯಲ್ಲೇ ಕುಳಿತು ಬೆರಳ ತುದಿಯಲ್ಲೇ ಇ-ಕೆವೈಸಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಆಹಾರ ಇಲಾಖೆ ‘ಅನ್ನಸೇವೆ‘ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದೆ.

ಗುರುವಾರ ಬೆಂಗಳೂರು ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಹಾರ ಸಚಿವ ರಿಜ್ವಾನ್ ಅರ್ಷದ್, ಅಧಿಕೃತವಾಗಿ ಈ ಆ್ಯಪ್ ಅನಾವರಣಗೊಳಿಸಿದರು. ಫಲಾನುಭವಿಗಳು ಗೂಗಲ್ ಪ್ಲೇಸ್ಟೋರ್‌ನಲ್ಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಯುಐಡಿಎಐ ಫೇಸ್ ಆಥಂಟಿಕೇಷನ್ ತಂತ್ರಜ್ಞಾನ ಬಳಸಿ ಮನೆಯಲ್ಲಿ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.

ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳದ ಫಲಾನುಭವಿಗಳು, ಆಹಾರ ಇಲಾಖೆಯ ಅಧಿಕಾರಿಗಳು ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಇಕೆವೈಸಿ ಮಾಡಬಹುದು. 2ನೇ ಹಂತದಲ್ಲಿ ಆ.10ರಿಂದ ಉಳಿದ ಜಿಲ್ಲೆಗಳ ಫಲಾನುಭವಿಗಳಿಗೆ ಆ್ಯಪ್ ಬಳಸಲು ಅವಕಾಶ ಕಲ್ಪಿಸಲಾಗಿದೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಿಜ್ವಾನ್ ಅರ್ಷದ್ ಅವರು, ರಾಜ್ಯದಲ್ಲಿ ಒಟ್ಟು 2,67,64,276 ಫಲಾನುಭವಿಗಳು ಇಕೆವೈಸಿ ಮಾಡಿಸಬೇಕು. ಸೆ.29ರವರೆಗೆ 1,56,21,608 ಮಂದಿ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಮ್ಮೆಯೂ ಇ-ಕೆವೈಸಿ ಮಾಡಿಸದ 3,82,362 ಸದಸ್ಯರು ತಕ್ಷಣ ಇ-ಕೆವೈಸಿ ಮಾಡಬೇಕು. ತಪ್ಪಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ನ್ಯಾಯಬೆಲೆ ಅಂಗಡಿಗಳು, ಆಹಾರ ನಿರೀಕ್ಷಕರ ಮೂಲಕವೂ ಇ-ಕೆವೈಸಿ ಮಾಡಿಸಬಹುದು ಎಂದು ತಿಳಿಸಲಾಗಿದೆ.

*ಅನ್ನ ಸೇವೆ’ ಆ್ಯಪ್ ಬಳಕೆ ಹೇಗೆ?:* ‘ಅನ್ನ ಸೇವೆ’ ಆ್ಯಪ್ ಬಳಸುವ ಮುನ್ನ ಫಲಾನುಭವಿಗಳು ತಮ್ಮ ಮೊಬೈಲ್‌ನ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಸಿಐಜಿ ಫೇಸ್ ಕೆವೈಸಿ ಆ್ಯಪ್, ಆಧಾರ್‌ಫೇಸ್ ಆರ್‌ಡಿ ಮತ್ತು ಅನ್ನಸೇವೆ ಎಂಬ 3 ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೇಸ್ ಆಥಂಟಿಕೇಷನ್ ತಂತ್ರಜ್ಞಾನ ಬಳಸಿ ಇ-ಕೆವೈಸಿ ಮಾಡಿಕೊಳ್ಳಬಹುದು. ರಾಜ್ಯದಲ್ಲಿ ಬೋಗಸ್ ಕಾರ್ಡ್ ಪತ್ತೆ ಮತ್ತು ಪಡಿತರ ಸೋರಿಕೆ ತಡೆಗೆ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್ .20ರವರೆಗೆ ವಿಸ್ತರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!