ಉತ್ತರ ಕನ್ನಡ ಜಿಲ್ಲಾ ಮಟ್ಟದ 17 ವರ್ಷ ವಯೋಮಾನದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಆರ್.ಪಿ.ಎಸ್. ಸೆಕೆಂಡರಿ ಸ್ಕೂಲ್ ಬೆಳಸೆ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಮಾದೇವ ಗೌಡ 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ತೋರಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ಕ್ರೀಡೆಯಲ್ಲಿ ಅದ್ಭುತ ಸಾಧನೆ ಮಾಡಿದ ವಿದ್ಯಾರ್ಥಿನಿ ಚೈತ್ರಾ ಹಾಗೂ ಆಕೆಗೆ ಸೂಕ್ತ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ ರಾವ್ ಕೆ. ಅವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಾನಂದ ಆಗೇರ, ಉಪಾಧ್ಯಕ್ಷರಾದ ಮಾರುತಿ ಗೌಡ, ಸರ್ವ ಸದಸ್ಯರು, ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ಊರಿನ ನಾಗರಿಕರು ಆತ್ಮೀಯವಾಗಿ ಅಭಿನಂದಿಸಿ, ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.













Leave a Reply