​ಬಾಳೇಗುಳಿ–ಮಾಸ್ತಿಕಟ್ಟೆ ಹೆದ್ದಾರಿ ದುಸ್ಥಿತಿ ಖಂಡಿಸಿ ಅ. 25 ರಂದು ವಿನೂತನ ಪ್ರತಿಭಟನೆ:ಅಂಕೋಲಾದ ಶ್ರೀ ಗಜಾನನ ಟ್ಯಾಕ್ಸಿ ಸಂಘ ಸಂಪೂರ್ಣ ಬೆಂಬಲ​

​ಅಂಕೋಲಾ : ರಾಷ್ಟ್ರೀಯ ಹೆದ್ದಾರಿ-52 ರ ಬಾಳೇಗುಳಿಯಿಂದ ಮಾಸ್ತಿಕಟ್ಟೆವರೆಗಿನ ಕಳಪೆ ರಸ್ತೆ ಕಾಮಗಾರಿ ಹಾಗೂ ಹೊಂಡಗಳಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಖಂಡಿಸಿ ಅಕ್ಟೋಬರ್ 25 ರಂದು ಬಾಳೇಗುಳಿ ಸಮೀಪ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ ಹಾಗೂ ಜನಶಕ್ತಿ ವೇದಿಕೆ ನೇತೃತ್ವದಲ್ಲಿ ನಡೆಯಲಿರುವ ಈ ಹೋರಾಟಕ್ಕೆ ಇದೀಗ ಅಂಕೋಲಾ ದ ‘ಶ್ರೀ ಗಜಾನನ ಟ್ಯಾಕ್ಸಿ ಮಾಲಕರ ಹಾಗೂ ಚಾಲಕರ ಸಂಘ’ ಕೂಡ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

​ಇತ್ತೀಚೆಗಷ್ಟೇ ಕಾಮಗಾರಿ ಪೂರ್ಣಗೊಂಡಿದ್ದರೂ ರಸ್ತೆ ಸಂಪೂರ್ಣ ಹಾಳಾಗಿದ್ದು, ಅಪಘಾತದ ಭೀತಿ ಹೆಚ್ಚಾಗಿದೆ. ಇದರಿಂದ ವಾಹನ ಸವಾರರು ಹಾಗೂ ಚಾಲಕರು ಆರ್ಥಿಕ ನಷ್ಟ ಎದುರಿಸುತ್ತಿದ್ದಾರೆ. ಕಳಪೆ ಕಾಮಗಾರಿ ಕುರಿತು ತಾಂತ್ರಿಕ ತನಿಖೆ ನಡೆಸಿ ತಪ್ಪಿತಸ್ಥ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ ಹಾಗೂ ಜನಶಕ್ತಿ ವೇದಿಕೆ ಸಂಘಟನೆಗಳ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಅಕ್ಟೋಬರ್ 25 ರಂದು ಬಾಳೇಗುಳಿ ಸಮೀಪ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಶ್ರೀ ಗಜಾನನ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿದ್ದು.ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!