ಉತ್ತರ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ; ಕೆ. ಲಕ್ಷ್ಮಿಪ್ರಿಯಾ ವರ್ಗಾವಣೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.

ಈ ಕುರಿತು ನವೆಂಬರ್ 6ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಆದೇಶದ ಪ್ರಕಾರ, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ. ಲಕ್ಷ್ಮಿಪ್ರಿಯಾ ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಚುನಾವಣಾ ಕಾರ್ಯ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯ ವಿಭಾಗಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.

ಇನ್ನು ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಈ ವರ್ಗಾವಣೆಯೊಂದಿಗೆ ಉತ್ತರ ಕನ್ನಡ ಜಿಲ್ಲಾಡಳಿತದ ಚುಕ್ಕಾಣಿ ಇದೀಗ ಭೋಯರ್ ಹರ್ಷಲ್ ನಾರಾಯಣರಾವ್ ಅವರ ಕೈ ಸೇರಿದೆ.

Leave a Reply

Your email address will not be published. Required fields are marked *

error: Content is protected !!