ಅಂಕೋಲಾ ಕೆ.ಎಲ್.ಇ ಕಾಲೇಜಿಗೆ ಕೀರ್ತಿ ತಂದ ಸೂರಜ ನಾಯಕ; ರಾಜ್ಯಮಟ್ಟದ ಯುವ ಸಂಸತ್ತಿಗೆ ಆಯ್ಕೆ

ಅಂಕೋಲಾ : ಸ್ಥಳೀಯ ಕೆ. ಎಲ್.ಇ ಸಂಸ್ಥೆಯ ಶೇಷಗಿರಿ ಪಿಕಳೆ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿರುವ ಸೂರಜ ನಾಯಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ವಕೀಲರ ಸಂಘ, ಉತ್ತರಕನ್ನಡ ಜಿಲ್ಲೆ, ಕಾರವಾರ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೂರಜ ನಾಯಕ ಸಾಧನೆಗೆ ಗೌರವಾದ್ಯಕ್ಷರಾದ ಡಾ. ಪ್ರಭಾಕರ ಕೋರೆ, ಅಧ್ಯಕ್ಷರಾದ ಅಮಿತ್ ಪಿ. ಕೋರೆಬಿ.ಎಡ್. ವಿಭಾಗದ ಅಧ್ಯಕ್ಷರಾದ ಜಯಾನಂದ ಮುನವಳ್ಳಿ, ಸದಸ್ಯ ಕಾರ್ಯದರ್ಶಿಗಳಾದ ಮಹಾದೇವ ಬಳಿಗಾರ, ಪ್ರಾಚಾರ್ಯರಾದ ಡಾ. ವಿನಾಯಕ ಜಿ. ಹೆಗಡೆ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!